ವಂದನೆಯೂ ದೇವರ ಸ್ತೋತ್ರವೂ
1ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ 2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ, 3ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
4ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. 5ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.


