ಹಬಕ್ಕೂಕನ ದೂರು
1ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ.
2ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ?
ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.
3ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ?
ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.
4ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ;
ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.


