ಯಾಯೀರ್

3ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು. 4ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ. 5ಯಾಯೀರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.