ಯೆಪ್ತಾಹನು ಮಗಳು

34ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ. 35ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು 36ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು. 37ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು. 38ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು. 39ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು. 40ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.