ಯೆಹೋವನ ನ್ಯಾಯತೀರ್ಪಿನ ದಿನ

1“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು. 2ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ. 3ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.