ಎಲೀಯನ ಬರುವಿಕೆ

4“ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ. 5ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು; 6ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”