ಕುಷ್ಠರೋಗಿಯನ್ನು ಸ್ವಸ್ಥ ಮಾಡಿದ್ದು

ಮಾರ್ಕ 1:40-44; ಲೂಕ 5:12-14

1“ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು. 2ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು. 3ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು. 4ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.