ಯೇಸುವಿನಿಂದ ವಿಶ್ರಾಂತಿಯ ಆಹ್ವಾನ

28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.