ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು

ಮಾರ್ಕ 3:31-35; ಲೂಕ 8:19-21

46ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು. 47ಆಗ ಒಬ್ಬನು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು. 48ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ 49ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು. 50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.