ಕಡೆ ಮಾತುಗಳೂ ಹಾಗೂ ವಂದನೆಗಳು
22ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು. 23ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ. 24ನನ್ನ ಜೊತೆಗೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ. 25ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.


