ದೇವಸ್ತೋತ್ರವಚನವು
25-26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, 27ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


